ಬೆಂಗಳೂರು : ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 2020-21 ರಲ್ಲಿ ರೈತರಿಗೆ ಶೂನ್ಯ ಬಡ್ಡಿ ದರದಡಿ ಸಾಲ ನೀಡಲು ಮುಂದಾಗಿದೆ.

ರೈತರಿಗೆ ಪೂರ್ಣ ಪ್ರಮಾಣದಲ್ಲಿ ಬೆಳೆ ಸಾಲ ವಿತರಿಸಲು ರಾಜ್ಯ ಸರ್ಕಾರ ವ್ಯವಸ್ಥೆ ಮಾಡಿಕೊಂಡಿದ್ದು, 2020-21 ರಲ್ಲಿ ಶೂನ್ಯ ಬಡ್ಡಿದರದಡಿ 14 ಸಾವಿರ ಕೋಟಿ ರೂ. ಸಾಲ ನೀಡುವ ಗುರಿಹಾಕಿಕೊಳ್ಳಲಾಗಿದೆ.

ಅರ್ಹ ರೈತರಿಗೆ ಸಾಲ ಸೌಲಭ್ಯ ನೀಡುವುದರಲ್ಲಿ ಯಾವುದೇ ತೊಂದರೆಯಾಗಬಾರದು. ಈ ಪ್ರಕ್ರಿಯೆಯಲ್ಲಿ ವಿಳಂಬವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಹಕಾರ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ.ಜೊತೆಗೆ ಕಳೆದ ಬಾರಿಯ ಸಾಲ ಮನ್ನಾ ವ್ಯಾಪ್ತಿಯಲ್ಲಿದ್ದ ರೈತರಿಗೆ ಈ ಬಾರಿ ಸಾಲ ಸೌಲಭ್ಯ ಸಿಗುವುದು ಖಚಿತವಾಗಿದೆ.!