ಬೆಂಗಳೂರು: ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, ಸುಸ್ತಿ ಸಾಲ ಮನ್ನಾ ಜೊತೆಗೆ ಒಂದು ಲಕ್ಷ ರುಪಾಯಿ ವರರೆಗಿನ ಚಾಲ್ತಿ ಬೆಳೆಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದ್ದಾರೆ. ಇಂದು ಈ ಸಾಲಿನ ಧನವಿನಿಯೋಗ ವಿಧೇಯಕ ಗುರುವಾರ ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದು ಇದರಿಂದ ಸರ್ಕಾರಕ್ಕೆ 10,700 ಕೋಟಿ ರುಪಾಯಿ ಹೊರೆಯಾಗಲಿದೆ ಎಂದರು.

ಈಗಾಗಲೇ ರಾಷ್ಟ್ರೀಕೃತ, ಸಹಕಾರಿ, ಕಿಸಾನ್ ಕಾರ್ಡ್‌ಗಳ 2 ಲಕ್ಷದ ವರೆಗಿನ ಸುಸ್ತಿ ಸಾಲವನ್ನು ಮನ್ನಾ ಮಾಡಲಾಗಿದ್ದು, ಚಾಲ್ತಿ ಸಾಲದ ರೈತರಿಗೆ ಅನ್ಯಾಯವಾಗಬಾರದು ಎಂಬ ಉದ್ದೇಶದಿಂದ ಈಗ ರೈತರ ಚಾಲ್ತಿ ಸಾಲವನ್ನೂ ಮನ್ನಾ ಮಾಡುತ್ತಿರುವುದಾಗಿ ಸಿಎಂ ಹೇಳಿದ್ದಾರೆ.