ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಪ್ರಸಕ್ತ ಸಾಲಿನಲ್ಲಿ 24 ಲಕ್ಷ 50 ಸಾವಿರ ರೈತರಿಗೆ 14,500 ಕೋಟಿ ರೂ.ಗಳ ಬೆಳೆ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಈವರೆಗೆ 10,57,825 ರೈತರಿಗೆ 7038.91 ಕೋಟಿ ರೂ. ಸಾಲವನ್ನು ವಿತರಣೆ ಮಾಡಲಾಗಿದೆ. 4.50 ಲಕ್ಷ ಹೊಸ ಸದಸ್ಯ ರೈತರಿಗೆ 2,500 ಕೋಟಿ ರೂ. ಬೆಳೆ ಸಾಲ ವಿತರಿಸುವ ಗುರಿ ಹೊಂದಲಾಗಿದ್ದು, ಇದರಲ್ಲಿ 1 ಲಕ್ಷ ರೈತರಿಗೆ 626 ಕೋಟಿ ರೂ. ಬೆಳೆ ಸಾಲವನ್ನು ಈಗಾಗಲೇ ವಿತರಿಸಲಾಗಿದೆ. ಇನ್ನು ಕೃಷಿ ಹೈನುಗಾರಿಕೆ, ಮೀನುಗಾರಿಕೆಗೆ ಹಾಗೂ ಬೆಳೆ ಸಾಲಕ್ಕೆ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷದವರೆಗೆ ಸಾಲ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.