ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ಏಪ್ರಿಲ್ 10ರೊಳಗೆ ಹಣ ಜಮಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಏಪ್ರಿಲ್ 10ರೊಳಗೆ ಕೃಷಿಕರ ಬ್ಯಾಂಕ್ ಖಾತೆಗೆ 2000 ರೂಪಾಯಿ ಜಮಾ ಆಗಲಿದೆ. ಸಾಮಾಜಿಕ ಭದ್ರತಾ ಯೋಜನೆಯಡಿ ಎರಡು ತಿಂಗಳ ಪಿಂಚಣಿ ಮುಂಗಡವಾಗಿ ಏಪ್ರಿಲ್ 10 ರೊಳಗೆ ಖಾತೆಗೆ ಜಮಾ ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ 15 ಲಕ್ಷ ಫಲಾನುಭವಿಗಳ ಖಾತೆಗೆ ಗ್ಯಾಸ್ ಸಿಲಿಂಡರ್ ವೆಚ್ಚ ಜಮಾ ಮಾಡುವ ಕಾರ್ಯ ಆರಂಭವಾಗಿದೆ ಎಂದು ಹೇಳಿದ್ದಾರೆ.