ಬೆಂಗಳೂರು:  ರೈತರ ಸಾಲ ಮನ್ನಾ ಯೋಜನೆಗೆ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ತಮ್ಮ ಒಂದು ದಿನದ ಸಂಬಳವನ್ನು ನೀಡಲು ಮುಂದಾಗಿದ್ದಾರೆ.

ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ಪಿ.ಕರಬಸಪ್ಪ ರಾಜ್ಯ ಸರ್ಕಾರ ಉದ್ದೇಶಿಸಿರುವ ಸಾಲಮನ್ನಾಕ್ಕೆ ನಾವು ಕೂಡ ಕೈ ಜೊಡಿಸಲಿದ್ದು ಒಂದು ದಿನದ ಸಂಬಂಳವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುವುದು  ಎಂದು ಪತ್ರಿಕಾ ಹೇಳಿಕೆ ಯನ್ನು ಬಿಡುಗಡೆ ಮಾಡಿದ್ದಾರೆ.

(ಸಾಂದರ್ಭಿಕ ಚಿತ್ರ)