ಬೆಂಗಳೂರು : ಸಿಎಂ ಹೆಚ್.ಡಿ.ಕುಮಾರಸ್ವಾಮಿ ರೈತ ಮಹಿಳೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದಕ್ಕೆ ಬಿಜೆಪಿ ನಾಳೆಯಿಂದ ರಾಜ್ಯ ವ್ಯಾಪಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾಜಿ ಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನೀವು ಹಾಗೂ ದೇವೆಗೌಡರು ದೇಶದ ಅತಿ ದೊಡ್ಡ ಸಮಯ ಸಾಧಕ ರಾಜಕಾರಣಿಗಳು. ನೀವು ಹೆಣ್ಣು ಮಗಳ ವಿರುದ್ದ ಮಾತನಾಡಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಮಾನ ಅಂತ ವಾಗ್ದಾಳಿ ನಡೆಸಿದಲ್ಲದೇ, ನಾಳೆಯಿಂದ ರಾಜ್ಯ ವ್ಯಾಪಿ ಪ್ರತಿಭಟನೆಗೆ ಬಿಜೆಪಿ ಸಜ್ಜಾಗಿದೆ.