ಬೆಂಗಳೂರು: ಸೌಥ್‌ ಈಸ್ಟ್‌ ಸೆಂಟ್ರಲ್ ರೈಲ್ವೆಯು, ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.

ಒಟ್ಟು 437 ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಪಾಸ್‌ ಜೊತೆಗೆ, ಹುದ್ದೆಗಳಿಗೆ ಸಂಬಂಧಿಸಿದ ವಿಭಾಗದಲ್ಲಿ ಐಟಿಐ ಶಿಕ್ಷಣ ಪೂರೈಸಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 8000 ದಿಂದ 15992 ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕಡೆ ದಿನ ಆ.30 ಆಗಿದೆ. ಹೆಚ್ಚಿನ ಮಾಹಿತಿಗೆ https://secr.indianrailways.gov.in/ಗೆ ಸಂಪರ್ಕಿಸಬಹುದು.