ಬೆಂಗಳೂರು: ಉಪ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬಳಿಕ ಎಲ್ಲ ಅನರ್ಹ ಶಾಸಕರು ಬೆಂಗಳೂರಿಗೆ ತಲುಪಿದ್ದು, ನಾಳೆ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಆದರೆ?

ಶಿವಾಜಿನಗರ ಕ್ಷೇತ್ರದ ಅನರ್ಹ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ಸೇರ್ಪಡೆಗೆ ಬಿಜೆಪಿ ಹೈಕಮಾಂಡ್ ತಡೆದಿದೆಯಂತೆ.! ಏಕೆಂದರೆ ಐಎಂಎ ವಂಚನೆ ಪ್ರಕರಣದಲ್ಲಿ ಬೇಗ್ ಹೆಸರು ಕೇಳಿಬಂದಿರುವ ಹಿನ್ನೆಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬುದು ಸುದ್ದಿ ಹರಿದಾಡುತ್ತಿದೆ.