ಲಕ್ನೋ: ದೇಶದಾದ್ಯಂತ ಇದೇ 16 ರಿಂದ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಆರಂಭಿಸಲು ಸಕಲ ಸಿದ್ಧತೆಯನ್ನು ನಡೆಸಲಾಗಿದೆ. ಈಗಾಗಲೇ ಅನೇಕ ರಾಜ್ಯಗಳ ಪ್ರಮುಖ ಕೇಂದ್ರಗಳಿಗೆ ಮೊದಲ ಹಂತದ ಕೋವಿಡ್ ಲಸಿಕೆ ಪೂರೈಕೆಯಾಗಿದೆ. ರಾಜ್ಯಗಳು ಮತ್ತು ಜಿಲ್ಲೆಗಳಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದುಕೊಳ್ಳುವ ಆರೋಗ್ಯ ಕಾರ್ಯಕರ್ತರನ್ನು ಗುರುತಿಸಲಾಗಿದೆ. ಉತ್ತರ ಪ್ರದೇಶದ ಅಯೋಧ್ಯಾದಲ್ಲಿನ ಅಧಿಕಾರಿಗಳು ಮೃತ ನರ್ಸ್ ಒಬ್ಬರನ್ನು ಕೂಡ ಈ ಪಟ್ಟಿಯಲ್ಲಿ ಸೇರಿಸಿದೆ.

ಅಯೋಧ್ಯಾದಲ್ಲಿ ಕೋವಿಶೀಲ್ಡ್ ಲಸಿಕೆಯನ್ನು ಪಡೆದುಕೊಳ್ಳುವ ಸಲುವಾಗಿ ಸಿದ್ಧಪಡಿಸಿರುವ ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರ ಪಟ್ಟಿಯಲ್ಲಿ ಅನೇಕ ಲೋಪದೋಷಗಳು ಕಂಡುಬ0ದಿವೆ. ಅಯೋಧ್ಯಾದ ಡಫೆರಿನ್ ಆಸ್ಪತ್ರೆಯ ಆರೋಗ್ಯ ಇಲಾಖೆಯು ತಯಾರಿಸಿದ ಪಟ್ಟಿಯಲ್ಲಿ ಮೃತಪಟ್ಟವರು, ನಿವೃತ್ತರಾದವರು ಮತ್ತು ರಾಜೀನಾಮೆ ನೀಡಿದ ದಾದಿಯರು ಕೂಡ ಲಸಿಕೆ ಪಡೆದುಕೊಳ್ಳಲಿದ್ದಾರೆ. ಎಂದು ಪಟ್ಟಿಮಾಡಿದ್ದಾರೆ. ಈ ಯಡವಟ್ಟು ಸರ್ಕಾರದ ಗಮನಕ್ಕೆ ಬಂದಿzದೆ. ಇದರ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿ ವಿರುದ್ಧಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಉತ್ತರ ಪ್ರದೇಶ ಆರೋಗ್ಯ ಸಚಿವ ಜೈ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

ಮೂರು ತಿಂಗಳ ಹಿಂದೆಯೇ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿತ್ತು.ಆದರೆ ಅದನ್ನು ಇನ್ನೂ ಪರಿಷ್ಕರಿಸಿಲ್ಲ. ಹೀಗಾಗಿ ಈ ತಪ್ಪುಗಳಾಗಿವೆ ಎಂದು ಸ್ಥಳೀಯ ಅಧಿಕಾರಿಗಳು ಸ್ಪಷ್ಟೀಕರಣ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಅತಿ ಮುಖ್ಯವಾಗಿರುವ ಆರೋಗ್ಯ ಕೆಲಸಗಾರರಿಗೆ ೮೫೨ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ.