ಬೆಂಗಳೂರು: ಕೊರೋನಾ ಸೋಂಕು ಹಬ್ಬುವುದನ್ನು ತಡೆಯಲು ಘೋಷಿಸಿರುವ ಲಾಕ್‌ಡೌನ್‌ ಮತ್ತು ಅಧಿಕಾರಿಗಳ ಸೂಚನೆ ಉಲ್ಲಂಘಿಸುತ್ತಾರೋ ಅಂತಹವರನ್ನು ಜೈಲಿಗೆ ತಳ್ಳಿ ಎಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ವೈದ್ಯರಿಗೆ, ಆರೋಗ್ಯ ಕಾರ್ಯಕರ್ತರಿಗೆ ಮತ್ತು ಯಾವುದೇ ಸರ್ಕಾರಿ ಸಿಬ್ಬಂದಿಯ ಕಾರ್ಯ ನಿರ್ವಹಣೆಗೆ ತಡೆಯೊಡ್ಡಿದರೆ ಅಂಥವರಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಬೇಕು. ಇಂಥಾ ಕೃತ್ಯದಲ್ಲಿ ಯಾರಿಗಾದರೂ ಪ್ರಾಣಹಾನಿಯಾದರೆ ತಪ್ಪಿತಸ್ಥರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಬೇಕು ಎಂದು ಹೇಳಿದೆ.

( ಸಾಂದರ್ಭಿಕ ಚಿತ್ರ)