ನವದೆಹಲಿ: ಕೇಂದ್ರ ಗೃಹ ಸಚಿವಾಲಯ ಇಂದು ಅನ್ ಲಾಕ್ 4 ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದ್ದು, ಇದರ ಅನ್ವಯ ದೇಶದ ಕಂಟೈನ್ಮೆಂಟ್ ಜೋನ್ ಗಳಲ್ಲಿ ಸೆಪ್ಟೆಂಬರ್ 30ರವರೆಗೆ ಲಾಕ್‌ಡೌನ್ ಅನ್ನು ವಿಸ್ತರಿಸಲಾಗಿದೆ.

ಅಲ್ಲದೆ ಸರಕು ರವಾನಿಸಲು ಮತ್ತು ವ್ಯಕ್ತಿಗಳ ಅಂತರ ರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ. ಇಂತಹ ಸಂಚಾರಕ್ಕೆ ಪ್ರತ್ಯೇಕ ಅನುಮತಿ ಅಥವಾ ಇ-ಪರ್ಮಿಟ್ ಅಗತ್ಯವಿರುವುದಿಲ್ಲ ಎಂದಿದೆ.

ಸೀಮಿತ ಅಂತರರಾಷ್ಟ್ರೀಯ ವಿಮಾನಯಾನ ಸೇವೆಯನ್ನು ಹೊರತುಪಡಿಸಿ, ಉಳಿದ ವಿಮಾನ ಪ್ರಯಾಣವನ್ನು ಸ್ಥಗಿತಗೊಳಿಸಲಾಗುತ್ತದೆ.!