ಬೆಂಗಳೂರು: ಲಾಕ್ ಡೌನ್ ಅವಧಿಯ ಗೌರವಧನ ಪಾವತಿಸಲು ಕಾಲೇಜು ಶಿಕ್ಷಣ ಇಲಾಖೆ ಪ್ರಾಂಶುಪಾಲರಿಗೆ ಸೂಚನೆ ನೀಡಿದೆ.

ಈ ಮೂಲಕ ಅತಿಥಿ ಉಪನ್ಯಾಸಕರಿಗೆ ಕಾಲೇಜು ಶಿಕ್ಷಣ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದೆ. ಮಾರ್ಚ್ ತಿಂಗಳಿಂದ ಆಗಸ್ಟ್ ವರೆಗೆ ವಿಶೇಷ ಪ್ರಕರಣದಡಿ ಕರ್ತವ್ಯದ ಅವಧಿ ಎಂದು ಪರಿಗಣಿಸಿ ಗೌರವಧನ ಪಾವತಿಸಲು ಅನುಮತಿ ನೀಡಿ ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದೆ. ಒಟ್ಟು ರೂ.55.70 ಕೋಟಿಗಳನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯು ಒಪ್ಪಿದೆ.!