ನವದೆಹಲಿ: ಲಾಕ್‌ಡೌನ್‌ನಲ್ಲಿ ಲಕ್ಷಾಂತರ ಬಡ ಜನರು ಅನುಭವಿಸಿದ ನೋವು, ದೇಶ ವಿಭಜನೆಯ ನಂತರ ಭಾರತದಲ್ಲಿ ನಡೆದ ‘ಮಾನವ ನಿರ್ಮಿತ ದೊಡ್ಡ ದುರಂತ’ ಎಂದು ಖ್ಯಾತ ಇತಿಹಾಸಕಾರ ಮತ್ತು ಅರ್ಥಶಾಸ್ತ್ರಜ್ಞ ರಾಮಚಂದ್ರ ಗುಹಾ ಅಭಿಪ್ರಾಯ ಪಟ್ಟಿದ್ದಾರೆ.

ದೇಶದ ಇತರ ಜನರ ಮೇಲೂ ಸಾಮಾಜಿಕ ಮತ್ತು ಮಾನಸಿಕ ಪರಿಣಾಮಗಳಾಗುತ್ತವೆ ಎಂದು ಎಚ್ಚರಿಸಿದ ಅವರು, ‘ಲಾಕ್‌ಡೌನ್ ಘೋಷಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಲಸೆ ಕಾರ್ಮಿಕರಿಗೆ ತಮ್ಮ ಮನೆಗಳಿಗೆ ಮರಳಲು ಕನಿಷ್ಠ ಒಂದು ವಾರ ಕಾಲಾವಕಾಶ ನೀಡಿದ್ದರೆ ವಲಸೆ ಕಾರ್ಮಿಕರ ದುರಂತಗಳನ್ನು ತಪ್ಪಿಸಬಹುದಿತ್ತು ಅಥವಾ ಕಡಿಮೆ ಮಾಡಬಹುದಿತ್ತು’ ಎಂದು ಹೇಳಿದ್ದಾರೆ.