ನವದೆಹಲಿ : ಕೊರೊನಾ ವೈರಸ್ ಲಾಕ್ ಡೌನ್ ಸಂದರ್ಭದಲ್ಲಿ ರಾಜ್ಯಗಳ ಆದಾಯ ಕೊರತೆಯನ್ನು ಸರಿದೂಗಿಸಲು ಕೇಂದ್ರ ಸರ್ಕಾರವು 14 ರಾಜ್ಯಗಳಿಗೆ 6,195 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದೆ.

ಈ ಕುರಿತು ಹಣಕಾಸು ಸಚಿವಾಲಯ ಟ್ವೀಟ್ ಮಾಡಿದ್ದು, ಕೇರಳಕ್ಕೆ 1,276 ಕೋಟಿ ರೂ. ಆಂಧ್ರಪ್ರದೇಶಕ್ಕೆ 491 ಕೋಟಿ ರೂ. ವಿತರಣೆಯಾಗಿದೆ. ಕೊರೊನಾ ಬಿಕ್ಕಟ್ಟು ನಿವಾರಣೆ ಕಾರ್ಯಕ್ರಮಗಳಿಗೆ ಈ ಹಣ ನೆರವಾಗಲಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.ಆದರೆ ಕೇಂದ್ರ ಸರ್ಕಾರ 14 ರಾಜ್ಯಗಳಿಗೆ ಹಣ ಬಿಡುಗಡೆ ಮಾಡಿರುವ   ಪಟ್ಟಿಯಲ್ಲಿ ಕರ್ನಾಟಕದ ಹೆಸರು ಇಲ್ಲ.