ವಿಜಯಪುರ: ಲಾರಿ ಮತ್ತು ಕೆಎಸ್ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮದಿಂದ  ಇಬ್ಬರು ಚಾಲಕರು ಸೇರಿ ಮೂರು ಜನ ಸಾವನ್ನಪ್ಪಿದ್ದು, 12 ಜನ ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ.

ಆಂಧ್ರಪ್ರದೇಶ ಮೂಲದ ಮಾದಪ್ಪ ಹಾಗೂ ತಿಕೋಟಾದ ಬಾಲಾಸಾಹೇಬ್  ಮೃತ ದುರ್ದೈವಿಗಳು. ಆದರೆ, ಬಸ್ ಚಾಲಕನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ ಹಾಗೂ ಲಾರಿ ಚಾಲಕರ ಮೃತ ದೇಹಗಳು ಛಿದ್ರ ಛಿದ್ರವಾಗಿದೆ. ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.