ಚಿತ್ರದುರ್ಗ: ಲಿಂಗಾಯಿತ ಪ್ರತ್ಯೇಕ ಧರ್ಮದ ಹೋರಾಟದ ಮುಂಚೂಣಿಯಲ್ಲಿ ಒಬ್ಬರಾದ ಮತಾ ಮಹಾದೇವಿ ದುರ್ಗದಲ್ಲಿ ಮಾತನಾಡಿದ್ದು ಏನಪ್ಪ ಅಂದ್ರೆ.ಕೇಂದ್ರ ಸರ್ಕಾರ ವೀರಶೈವ-ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡದೆ ಇದ್ದರೆ ತಾವು ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಬಸಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿದರು.

.ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ. ನಂತರ ದೆಹಲಿಯಲ್ಲಿ ಬೃಹತ್ ಜಾಥಾ ನಡೆಸುತ್ತೇವೆ ಎಂದರು.

ಈ ಮೊದಲು ಪ್ರತ್ಯೇಕ ಧರ್ಮ ಹೋರಾಟಕ್ಕೆ ಬಿಜೆಪಿ ವಿರೋಧಿಸಿತ್ತು. ಆದರೆ ಈಗ ಜನರ ಬೇಡಿಕೆ ಹೆಚ್ಚಾಗಿರುವ ಕಾರಣ ಬೇಡಿಕೆಗೆ ಸ್ಪಂದಿಸಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ಸಿಗುವ ವಿಶ್ವಾಸವಿದೆ ಎಂದರು.