ಚಿತ್ರದುರ್ಗ: ಈಗಾಗಲೇ ರಾಜ್ಯ ಸರಕಾರ ಲಿಂಗಾಯಿತ ಸ್ವತಂತ್ರ ಧರ್ಮಕ್ಕೆ ಸಂಬಂಧಿಸಿದಂತೆ ಕೇಂದ್ರಕ್ಕೆ ಶಿಫಾರಸ್ ಮಾಡಿರುವ ಬೆನ್ನಲ್ಲೆ ಇಂದು ಮುರುಘಾ ಮಠಕ್ಕೆ ಭೇಟಿ ನೀಡಿದ ಭಾರತೀಯ ಜನತಾಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರನ್ನು ಸನ್ಮಾನಿಸಿ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡುವಂತೆ ಒತ್ತಾಯಿಸಿ ಮನವಿಯನ್ನು ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಶ್ರೀ ಪ್ರಸನ್ನ ವಾಲ್ಮೀಕಿ ಸ್ವಾಮಿಗಳು, ಶ್ರೀ ಸಿದ್ದರಾಮ ಸ್ವಾಮಿಗಳು, ಶ್ರೀ ಬಸವ ಮಾಚಿದೇವ ಸ್ವಾಮಿಗಳು, ಮರಳೇಗವಿಮಠದ ಸ್ವಾಮಿಗಳು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಪ್ರಹ್ಲಾದ್ ಜೋಷಿ, ಶ್ರೀರಾಮುಲು, ಜಿ.ಎಂ. ಸಿzಶ್ವರ ಮುಂತಾದವರಿದ್ದರು.