ಬೆಂಗಳೂರು : ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಚುನಾವಣಾ ಮೈತ್ರಿ ಮಾಡಿಕೊಳ್ಳುವುದಕ್ಕೆ ಕಾಂಗ್ರೆಸ್ ನ ಹಲವು ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರಂತೆ.

ಜೆಡಿಎಸ್ ನೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡರೆ ಕಾಂಗ್ರೆಸ್ ಗೆ ಹಿನ್ನೆಡೆಯಾಗಲಿದ್ದು, ಜೆಡಿಎಸ್ 8-10 ಕ್ಷೇತ್ರಗಳನ್ನು ಕೇಳುವ ಸಾಧ್ಯತೆ ಇದೆ. ಇದರಿಂದಾಗಿ ಕಾಂಗ್ರೆಸ್ ಪಕ್ಷ ಕಳೆದ ಬಾರಿ ಗೆದ್ದಿದ್ದ 9 ಸ್ಥಾನಗಳನ್ನೂ ಸಹ ಉಳಿಸಿಕೊಳ್ಳುವುದು ಕಷ್ಟವಿದೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕರಾದ ಕಾಗೋಡು ತಿಮ್ಮಪ್ಪ, ಹೆಚ್.ಕೆ. ಪಾಟೀಲ್, ಸಂಸದ ಚಂದ್ರಪ್ಪ ಸೇರಿ ಹಲವು ನಾಯಕರು ಮಾಜಿ ಸಿಎಂ ಸಿದ್ದರಾಮಯ್ಯ ಬಳಿ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.