ಕಲಬುರ್ಗಿ : ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಕಾಂಗ್ರೆಸ್ , ರಾಜ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ಇಂದು ಕಲಬುರ್ಗಿಗೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಸಂಸದೀಯ ನಾಯಕ , ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ಪರ ಪ್ರಚಾರ ನಡೆಸಲಿದ್ದಾರೆ.

ಹೈದರಾಬಾದ್ -ಕರ್ನಾಟಕ ಭಾಗದಲ್ಲಿ ಏಪ್ರಿಲ್ 23 ರಂದು ನಡೆಯಲಿರುವ ಮೂರನೇ ಹಂತದ ಲೋಕಸಭಾ ಚುನಾವಣೆಗೆ ಪ್ರಚಾರ ಕೈಗೊಳ್ಳಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಕಲಬುರಗಿಯಲ್ಲಿ ಚುನಾವಣಾ ರಣ ಕಹಳೆ ಊದಲಿದ್ದಾರೆ.!