ದಾವಣಗೆರೆ : ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮನೆಗೆ ಹೋಗಲಿದ್ದಾರೆ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಕೆಳಗಿಳಿಸಲಾಗುತ್ತಿದೆ. ಈಗಾಗಲೇ ಮಾಜಿ ಸಚಿವ ಆರ್. ಅಶೋಕ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಆ ಪಕ್ಷದ ಮುಖಂಡರು ತೆರೆಮರೆಯ ಪ್ರಯತ್ನ ನಡೆಸುತ್ತಿದ್ದಾರೆ ಎಂದರು. ಹಾಗಾಗಿ ಲೋಕಸಭಾ ಚುನಾವಣೆ ನಂತರ ಯಡಿಯೂರಪ್ಪ ಮನೆಗೆ ಹೋಗುತ್ತಾರೆ ಎಂದರು.

ಹಾಗೆನೇ ಯಾವುದೇ ಕಾರಣಕ್ಕೂ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾಗುವುದಿಲ್ಲ. ಬಿಜೆಪಿಯವರು ಸುಮ್ಮನೆ ಏನೆನೋ ಹೇಳಿಕೊಂಡು ಓಡಾಡುತ್ತಿದ್ದಾರೆ. ಮೇ. 23 ರ ಬಳಿಕವೂ ಏನೂ ಆಗುವುದಿಲ್ಲ. ಸರ್ಕಾರ ಐದು ವರ್ಷ ಪೂರೈಸುತ್ತದೆ ಎಂದರು.