ಶಿವಮೊಗ್ಗ : ಲೋಕಸಭಾ ಉಪ ಚುನಾವಣೆಯ ಮೂರು ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ವಿರೋಧ ಪಕ್ಷದ ಅಭ್ಯರ್ಥಿ ಯಾರೇ ಆದರೂ ಸಹ ಬಿ.ವೈ. ರಾಘವೇಂದ್ರ ಅತಿ ಹೆಚ್ಚು ಮತಗಳ ಅಂತರದಿಂದ ಜಯ ಗಳಿಸುತ್ತಾರೆ. ಬಳ್ಳಾರಿಯಲ್ಲಿ ಯಾವುದೇ ಬಂಡಾಯ ಇಲ್ಲ. ಸಣ್ಣ ಪುಟ್ಟ ವ್ಯತ್ಯಾಸಗಳಿದ್ದು ಅದು ಸರಿಯಾಗಲಿದೆ ಹಾಗೇ ಮಂಡ್ಯ ಕ್ಷೇತ್ರದಲ್ಲೂ ನಮ್ಮ ಪಕ್ಷಕ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.