ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಪ್ರವಾಸ ಒಂದು ದಿನದ ಮಟ್ಟಿಗೆ ಮುಂದೂಡಿಕೆಯಾಗಿದೆ.

ಮೊದಲು ನರೇಂದ್ರ ಮೋದಿ ಅವರು 8ರಂದು(ಸೋಮವಾರ) ಸಾಂಸ್ಕಂತಿಕ ನಗರಿ ಮೈಸೂರು ಮತ್ತು ಕೋಟೆನಾಡು ಚಿತ್ರದುರ್ಗದಲ್ಲಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಬೇಕಿತ್ತು.

ಆದರೆ ಯುಗಾದಿ ಹಬ್ಬದ ಸಂದರ್ಭದಲ್ಲಿ ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿರುವುದು ಹಾಗೂ ಹಬ್ಬದ ಮರುದಿನವೇ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೋ ಇಲ್ಲವೋ ಎಂಬ ಕಾರಣಕ್ಕಾಗಿ ಮುಂದೂಡಲಾಗಿದೆ. ಸೋಮವಾರದ ಬದಲು ಮಂಗಳವಾರ ಮೋದಿ ಮತ ಪ್ರಚಾರ ನಡೆಸಲಿದ್ದಾರೆ