ಬೆಂಗಳೂರು:ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದ್ದು,  ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಏಳು ಸಮಾವೇಶ ಅಯೋಜಿಸಲು ತೀರ್ಮಾನಿಸಿದೆ ಎಂಬುದು ಸುದ್ದಿ.

ಚುನಾವಣಾ ದಿನಾಂಕ ಘೋಷಣೆ ಬಳಿಕ ಹೆಚ್ಚಿನ ಸಮಾವೇಶಗಳಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅಧಿಸೂಚನೆಗೂ ಮುನ್ನವೇ ಮೋದಿ ಅವರನ್ನು ರಾಜ್ಯದಲ್ಲಿ 7 ಸಮಾವೇಶ ನಡೆಸಲು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಯೋಜನೆಯಾಗಿದೆಯಂತೆ.

ರಾಜ್ಯದ ವಿವಿಧ ಭಾಗಗಳಲ್ಲಿ ವಿವಿಧ ಸಮುದಾಯಗಳ ಸಮಾವೇಶ ನಡೆಸಿ ಕೇಂದ್ರ ಸರ್ಕಾರ ಆ ಸಮುದಾಯಗಳ ಅಭಿವೃದ್ಧಿಗೆ ಕೈಗೊಂಡಿರುವ ಯೋಜನೆಗಳನ್ನು ಜನರ ಮುಂದಿಡುವ ಪ್ಲಾನ್ ಮಾಡಲಾಗಿದೆ ಎಂಬುದು ಸುದ್ದಿ.