ನವದೆಹಲಿ :  ದೊಸ್ತಿ ಸರಕಾರದ   ಸಮನ್ವಯ ಸಮಿತಿ ಅಧ್ಯಕ್ಷರು,  ಕಾಂಗ್ರೆಸ್ ಶಾಸಕಾಂಗ ನಾಯಕರು, ಜೊತೆಗೆ ಕಾಂಗ್ರೆಸ್ ಕಾರ್ಯಕಾರಣಿ ಸಮಿತಿಯ ಸದಸ್ಯರು ಆಗ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯರ ಕಿರಿಟಕ್ಕೆ ಮತ್ತೊಂದು ಗರಿ ಬಂದಿದೆಯಂತೆ.  

ಏನಪ್ಪ ಹೊಸದು ಅಂದ್ರೆ 2019 ರ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸಿದ್ದರಾಮಯ್ಯರ ಹೆಗಲಿಗೆ ವಹಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ನ್ನು ಮುನ್ನಡೆಸಲು ಸಿದ್ದರಾಮಯ್ಯ ಅವರೇ ಸೂಕ್ತ ವ್ಯಕ್ತಿ ಎಂಬುದನ್ನು ತಿಳಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಸಿದ್ದರಾಮಯ್ಯರ ಹೆಗಲಿಗೆ ವಹಿಸಿದ್ದಾರಂತೆ.!