ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ಖಚಿತ. ಕಳೆದ ಬಾರಿ ಸೋತ ಕಡೆಗಳಲ್ಲೂ ಬಿಜೆಪಿ ಗೆಲ್ಲುತ್ತದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದ ಜನರಲ್ಲಿ ಬಿಜೆಪಿ ಬಗ್ಗೆ ಒಳ್ಳೆಯ ವಿಶ್ವಾಸವಿದೆ. ಭ್ರಷ್ಟಾಚಾರ ಆರೋಪವಿಲ್ಲದೆ ಉತ್ತಮ ಆಡಳಿತ ನೀಡಿದ್ದೇವೆ. ಹಿಂದಿನ ಸರ್ಕಾರ ದೇಶದ ಜನರನ್ನು ಕತ್ತಲಲ್ಲಿ ಇಟ್ಟಿತ್ತು. ನಾವು ಪ್ರತಿ ಪೈಸೆಯನ್ನೂ ಅಭಿವೃದ್ಧಿಗೆ ಬಳಸುತ್ತಿದ್ದೇವೆ ಎಂದು ಹೇಳಿದ್ದಾರೆ.