ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿ 184 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ವಾರಣಾಸಿಯಿಂದ ಪ್ರಧಾನಿ ಮೋದಿ ಸ್ಪರ್ಧಿಸಲಿದ್ದಾರೆ.

ಇನ್ನು ಎಲ್.ಕೆ. ಅಡ್ವಾಣಿ ಅವರು ಪ್ರತಿನಿಧಿಸುತ್ತಿದ್ದ ಗುಜರಾತಿನ ಗಾಂಧಿನಗರ ಕ್ಷೇತ್ರದಿಂದ ಈ ಬಾರಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸ್ಪರ್ಧಿಸಲಿದ್ದಾರೆ.

ಈ ಮೂಲಕ ಬಿಜೆಪಿ ಭೀಷ್ಮ ಅಡ್ವಾಣಿ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿರುವುದು ಪಕ್ಕಾ ಆಗಿದೆ. ಈ ಬಾರಿ ಅಡ್ವಾಣಿ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ಅವರಿಗೆ ಕ್ಷೇತ್ರವೇ ಇಲ್ಲದಂತೆ ಮಾಡಿರುವುದು ಬಿಜೆಪಿಯ ಕೆಲ ನಾಯಕರುಗಳಿಗೆ ಬೇಸರ ತರಿಸಿದೆ.!