ಬೆಂಗಳೂರು:  ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ‘ಎ’ತಾಂತ್ರಿಕ ಮತ್ತು ‘ಬಿ’ ತಾಂತ್ರಿಕ/ ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ವೃಂದಗಳ 251 ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು ಅಭ್ಯರ್ಥಿಗಳು ಜುಲೈ 10 ರಿಂದ ಅರ್ಜಿ ಸಲ್ಲಿಸಬಹುದು. ಆಗಸ್ಟ್ 10 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಗಸ್ಟ್ 11 ಶುಲ್ಕ ಪಾವತಿಗೆ ಅಂತಿಮ ದಿನವಾಗಿರುತ್ತದೆ.

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 300 ರೂ., ಮಾಜಿ ಸೈನಿಕರಿಗೆ 50 ರೂ. ಅರ್ಜಿ ಶುಲ್ಕವಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ಕರ್ನಾಟಕ ಲೋಕಸೇವಾ ಆಯೋಗದ ವೆಬ್ ಸೈಟ್ https://www.kpsc.kar.nic.in ಗಮನಿಸಬಹುದು.