ಬೆಂಗಳೂರು: ಲೋಕೋಪಯೋಗಿ ಇಲಾಖೆಯಲ್ಲಿ 990 ಗ್ರೂಪ್ ಬಿ ಮತ್ತು ಗ್ರೂಪ್ ಸಿ ತಾಂತ್ರಿಕ ಹುದ್ದೆಗಳಿಗೆ ಕೆಪಿಎಸ್ಸಿ ಅರ್ಜಿ ಆಹ್ವಾನಿಸಿದೆ.

18 ರಿಂದ 35 ವರ್ಷ ವಯೋಮಿತಿಯವರು ಅರ್ಜಿ ಸಲ್ಲಿಸಬಹುದು. ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇದೆ.

ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ನಡೆಯಲಿದೆ. ಬಿಇ, ಬಿಟೆಕ್, ಪದವಿ, ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ವರ್ಗದವರಿಗೆ ಅರ್ಜಿ ಶುಲ್ಕ 600 ರೂ. ನಿಗದಿಪಡಿಸಲಾಗಿದ್ದು ವಿವಿಧ ವರ್ಗದವರಿಗೆ ಶುಲ್ಕ ಕಡಿತ ಮತ್ತು ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 16 ಕೊನೆಯ ದಿನವಾಗಿದ್ದು, ಶುಲ್ಕ ಪಾವತಿಗೆ ಸೆಪ್ಟೆಂಬರ್ 18 ಕೊನೆಯ ದಿನವಾಗಿದೆ. http://www.kpsc.kar.nic.in ವೆಬ್ ಸೈಟ್ನಲ್ಲಿ ಮಾಹಿತಿ ಪಡೆಯಬಹುದಾಗಿದೆ ಎಂದು ಹೇಳಲಾಗಿದೆ.