ಬೆಂಗಳೂರು: ರಾಜ್ಯ ಸರ್ಕಾರವು 1 ಸಾವಿರ ತರಬೇತಿ ಎಂಜಿನಿಯರ್‌ಗಳನ್ನು ತಾತ್ಕಾಲಿಕವಾಗಿ ನೇಮಕ ಮಾಡಲಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಬಾಗಲಕೋಟೆಯಲ್ಲಿ ತಿಳಿಸಿದ್ದಾರೆ.

ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳಿಗೆ ಬಡ್ತಿ ನೀಡಲಾಗಿದ್ದು, ಸದ್ಯ ಕಿರಿಯ ಎಂಜಿನಿಯರ್‌ಗಳ ಕೊರತೆ ಇದೆ. ಇದಕ್ಕಾಗಿ ಹೊಸದಾಗಿ ನೇಮಕ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿತ್ತು. ಆದರೆ, ಕೆಲವರು ಕೋರ್ಟ್ ಮೊರೆ ಹೋಗಿದ್ದು, ಇದರಿಂದಾಗಿ ಎಂಜಿನಿಯರ್‌ಗಳ ಕೊರತೆ ನೀಗಿಸಲು ತಾತ್ಕಾಲಿಕವಾಗಿ ನೇಮಕಾತಿ ಮಾಡಲಾಗುವುದು ಎಂದರು.