ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವುದರಿಂದ ರಾಜ್ಯ ಸರ್ಕಾರವು ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇನ್ಮುಂದೆ ಕೊರೊನಾ ವರದಿ ಬರುವವರೆಗೂ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೋವಿಡ್ ಪರೀಕ್ಷೆಗಾಗಿ ಸ್ವಾಬ್ ಸ್ಯಾಂಪಲ್ ನೀಡಿರುವ ವ್ಯಕ್ತಿಗಳು ಪರೀಕ್ಷಾ ವರದಿ ಬರುವವರೆಗೂ ಕಡ್ಡಾಯವಾಗಿ ಮನೆಯಲ್ಲೇ ಪ್ರತ್ಯೇಕವಾಗಿರಬೇಕು. ಅಂತಹ ವ್ಯಕ್ತಿಗಳು ಜವಾಬ್ದಾರಿ ಮರೆತು ಹೊರಗೆ ಹೋದರೆ ಸೋಂಕು ಹರಡುವ ಅಪಾಯ ಇರುವುದರಿಂದ ನಿಯಮ ಮೀರಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದಾಗಿ ಸರ್ಕಾರ ಆದೇಶ ಹೊರಡಿಸಿದೆ