ಬೆಂಗಳೂರು: ಶಿಕ್ಷಕರ ನೂತನ ಕಾಯ್ದೆ ಅನ್ವಯ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಪೂರ್ಣಗೊಳಿಸಬೇಕೆಂದು ಸರ್ಕಾರಿ ನೌಕರರ ಸಂಘದ ನಿಯೋಗ ವತಿಯಿಂದ ಮನವಿ ಮಾಡಿರುವ ಹಿನ್ನೆಲೆಯಲ್ಲಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಇನ್ನು ಎರಡು ಮೂರು ದಿನದೊಳಗೆ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲು ಮುಂದಾಗಿದೆ.!

ವರ್ಗಾವಣೆ ಪೂರ್ಣಗೊಳಿಸಲು ವೇಳಾಪಟ್ಟಿ ಪ್ರಕಟ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ನೌಕರರ ಸಂಘದ ನಿಯೋಗ ಮನವಿ ಸಲ್ಲಿಸಿದ್ದು, ಇದಕ್ಕೆ ಪೂರಕವಾಗಿ ಸ್ಪಂದಿಸಿದ ಆಯುಕ್ತರು ಶಿಕ್ಷಕರ ವರ್ಗಾವಣೆಗಾಗಿ ಎರಡು ಮೂರು ದಿನದೊಳಗೆ ವೇಳಾಪಟ್ಟಿ ಪ್ರಕಟಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.