ಬೆಂಗಳೂರು: ವಲಸೆ ಕಾರ್ಮಿಕರಿಗೆ ಮೇ ಮತ್ತು ಜೂನ್ ನಲ್ಲಿ ಆಹಾರ ಧಾನ್ಯಗಳನ್ನು ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಆಹಾರ ಮತ್ತು ನಾಗರಿಕರ ಸರಬರಾಜು ಸಚಿವ ಕೆ. ಗೋಪಾಲಯ್ಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ

ವಲಸೆ ಕಾರ್ಮಿಕರಿಗೆ ಇದೇ 26 ರಿಂದ 31ರವರೆಗೆ ಪ್ರತಿ ವ್ಯಕ್ತಿಗೆ 5 ಕೆ.ಜಿ ಅಕ್ಕಿ ಉಚಿತವಾಗಿ ನೀಡಲು ನಿರ್ಧರಿಸಿದ್ದು, ಮುಂದಿನ ತಿಂಗಳು ಜೂನ್ 1 ರಿಂದ 10 ರವರೆಗೆ ಪ್ರತಿ ವ್ಯಕ್ತಿಗೆ 5 ಕೆ.ಜಿ ಅಕ್ಕಿ ಮತ್ತು ಪ್ರತಿ ಕುಟುಂಬಕ್ಕೆ 2 ಕೆ.ಜಿ ಕಡಲೆಕಾಳು ಉಚಿತವಾಗಿ ನೀಡಲಾಗುತ್ತದೆ.