ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ 2 ದಿನ ಸಾಧಾರಣ ಮಳೆಯಾಗಲಿದೆ. ನವೆಂಬರ್ 1 ರಿಂದ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.