ನವದೆಹಲಿ : ವಾಹನ ಸವಾರರಿಗೆ ಕೇಂದ್ರ ಸರ್ಕಾರವು ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಡ್ರೈವಿಂಗ್ ಲೈಸನ್ಸ್ ಸೇರಿದಂತೆ ವಿವಿಧ ಮೋಟಾರು ವಾಹನಗಳಿಗೆ ಸಂಬಂಧಿಸಿದ ದಾಖಲೆಗಳ ಮಾನ್ಯತೆಯನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ.

ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈ ಸಂಬಂಧ ಆದೇಶ ಹೊರಡಿಸಿದ್ದು, ಮೋಟಾರು ವಾಹನಗಳ ದಾಖಲೆಗಳ ಮಾನ್ಯತಾ ಅವಧಿ 2020 ರ ಫೆ. 1 ಕ್ಕೆ ಅಥವಾ ನಂತರದ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದೆ.

ಇನ್ನು ಫೆ. 1 ರಿಂದ ಬಾಕಿ ಇರುವ ದಾಖಲೆಗಳ ನವೀಕರಣಕ್ಕೆ ಯಾವುದೇ ಹೆಚ್ಚುವರಿ ಅಥವಾ ವಿಳಂಬ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.