ನವದೆಹಲಿ : ಇಂದು ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 48 ಪೈಸೆ ಹಾಗೂ ಡೀಸೆಲ್ ಬೆಲೆಯಲ್ಲಿ 59 ಪೈಸೆ ಏರಿಕೆಯಾಗಿದ್ದು, ಇದರಂತೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 76.26 ರೂ. ಹಾಗೂ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 74.62 ರೂ. ಏರಿಕೆಯಾಗಿದೆ.

ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಯ ಶಾಕ್ ಎದುರಾಗಿದ್ದು, ಸತತ 9 ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕಂಪನಿಗಳು ತೈಲ ಬೆಲೆ ಹೆಚ್ಚಳ ಮಾಡುತ್ತಿದ್ದು, ಇನ್ನು ಮುಂದಿನ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.