ವಿಜಯಪುರ: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರ ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.

ಬಿಜೆಪಿ ಮುಖಂಡ ಸೇರಿದಂತೆ ಐವರನ್ನು ಬಂಧಿಸಿದ್ದು, ಅವರಿಂದ 15 ಲಕ್ಷಕ್ಕೂ ಅಧಿಕ ನಗದು, ಕಾರು ಹಾಗೂ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.
ಬಂಧಿತರು ದಾನಮ್ಮ ಹಿರೇಮಠ, ಸುದೀರ್ ಘಟ್ಟನವರ, ರವಿ ಕಾರಜೋಳ, ಮಲ್ಲಿಕಾರ್ಜುನ ಮುರಗುಂಡಿ ಹಾಗೂ ಬಿಜೆಪಿ ಮುಖಂಡ ಶ್ರೀಕಾಂತ ಸೋಮಜಾಳ ಎಂದು ತಿಳಿದು ಬಂದಿದೆ.

ವಿಜಯಪುರ ಎಸ್ಪಿ ಪ್ರಕಾಶ ನಿಕ್ಕಮ್ ನೇತೃತ್ವದಲ್ಲಿ ಡಿವೈಎಸ್ಪಿ ಲಕ್ಷ್ಮಿನಾರಾಯಣ, ಸಿಪಿಐ ಮಹಾಂತೇಶ ಧಾಮಣ್ಣವರ ಈ ಪ್ರಕರಣ ಭೇದಿಸುವಲ್ಲಿ ಸಫಲರಾಗಿದ್ದಾರೆ.!