ಚಿತ್ರದುರ್ಗ : ವಿದೇಶದಿಂದ ಆಗಮಿಸುವ ಪ್ರತಿಯೊಬ್ಬರನ್ನು ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್ ಮಾಡಲಾಗುವುದು ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು, ವಿದೇಶದಿಂದ ರಾಜ್ಯಕ್ಕೆ ಬರುವ ಪ್ರತಿಯೊಬ್ಬರನ್ನು ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್ ಮಾಡಲಾಗುವುದು. ಪರೀಕ್ಷೆಯ ವರದಿ ನೆಗೆಟಿವ್ ಬಂದ ನಂತರ ಅವರನ್ನು ಮನೆಗೆ ಕಳುಹಿಸಲಾಗುವುದು ಎಂದು ಹೇಳಿದರು.

ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ರಾಜ್ಯದಲ್ಲಿ 22 ಪ್ರಯೋಗಾಲಯಗಳನ್ನು ಆರಂಭಿಸಲಾಗಿದೆ. ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದ ವ್ಯಕ್ತಿಗಳನ್ನು ಪರೀಕ್ಷೆ ಮಾಡುವ ಕೆಲಸ ಮಾಡಲಾಗುತ್ತಿದೆ. ಪ್ರತಿದಿನ ಕೋವಿಡ್ 19 ಕ್ಕೆ ಸಂಬಂಧಿಸಿದಂತೆ 6 ರಿಂದ 7 ಸಾವಿರದಷ್ಟು ಮಾದರಿಗಳನ್ನು ಪರೀಕ್ಷೆ ಮಾಡಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಮತ್ತು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಇನ್ನೂ ಹೆಚ್ಚಿನ ಪರೀಕ್ಷೆಗಳು ನಡೆಯಬೇಕಿದೆ. ಇನ್ಮುಂದೆ ಎಲ್ಲ ಜಿಲ್ಲೆಗಳಲ್ಲಿ ಪ್ರಯೋಗಾಲಯಗಳ ಆರಂಭಕ್ಕೆ ಒತ್ತು ನೀಡಲಾಗುವುದು ಎಂದರು.