ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಇಲ್ಲೊಂದು ಗುಡ್ ನ್ಯೂಸ್ ಇದ್ದು, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿ. 31 ರವರೆಗೆ ವಿಸ್ತರಿಸಲಾಗಿದೆ.

ಸ್ಟೇಟ್ ಸ್ಕಾಲರ್ ಶಿಪ್ ಪೋರ್ಟಲ್ ನಲ್ಲಿ ಅರ್ಜಿ ಹಾಕುವ ಸಮಯವನ್ನು ಡಿ. 31 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ನವೆಂಬರ್ 30ರೊಳಗೆ ಅರ್ಜಿ ಸಲ್ಲಿಸುವಂತೆ ಹೇಳಲಾಗಿತ್ತು. ಆದರೆ, ಸರ್ವರ್ ಸಮಸ್ಯೆಯ ಕಾರಣ ಇದೀಗ ಡಿ. 31ರವರೆಗೆ ವಿಸ್ತರಿಸಲಾಗಿದೆ ಎಂದು ಹೇಳಲಾಗಿದೆ.