ರಾಯಚೂರು: ವಿದ್ಯುತ್ ತಂತಿ ತಗುಲಿ ತಂದೆ, ಮಗ ದಾರುಣವಾಗಿ ಸಾವನಪ್ಪಿರುವ ಘಟನೆ ರಾಯಚೂರು ತಾಲೂಕಿನ ದಿನ್ನಿ ಗ್ರಾಮದಲ್ಲಿ ನಡೆದಿದೆ.

ತಂದೆ ಮಹೇಶ ಆನಂದಪ್ಪ(46), ಮಗ ವಿನೋದ್ ಮಹೇಶ್(16) ಮೃತಪಟ್ಟವರು. ಮನೆಯಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿದ್ದರಿಂದ ಏನಾಗಿದೆ ಎಂದು ನೋಡಲು ತೆರಳಿದ್ದಾರೆ. ಈ ವೇಳೆ ಕೆಳಗಡೆ ಬಿದ್ದಿದ್ದ ವಿದ್ಯುತ್ ತುಳಿದು ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಯರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಕೇಸನ್ನು ದಾಖಲಿಸಿಕೊಂಡಿದ್ದಾರೆ.