ಮಂಗಳೂರು : ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾಹಕರು ವಿದ್ಯುತ್ ಬಿಲ್ ಪಾವತಿಸದಿದ್ದರೂ ಮುಂದಿನ ಜೂನ್ ವರೆಗೆ ಗೃಹ ಬಳಕೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬಾರದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಭಾರೀ ವಿದ್ಯುತ್ ಶುಲ್ಕದ ಕುರಿತಂತೆ ಪ್ರಸ್ತಾಪಿಸಿದ ಅವರು, ತಿಂಗಳಿಗೆ 250 ರೂ. ಬಿಲ್ ಬರುತ್ತಿದ್ದ ಹಲವು ಮನೆಗಳಿಗೆ ದುಪ್ಪಟ್ಟು ಬಿಲ್ ಬಂದಿದೆ. ಲಾಕ್ ಡೌನ್ ಸಂದರ್ಭದಲ್ಲಿ ಜನರು ಕಷ್ಟದಲ್ಲಿರುವಾಗ ಅವರಿಗೆ ಬರೆ ಹಾಕುವ ಕಾರ್ಯವನ್ನು ಮಾಡಬೇಡಿ. ಜನಸಾಮಾನ್ಯರಿಗೆ ಸ್ಲ್ಯಾಬ್ ಆಧಾರದಲ್ಲಿ ದರ ವಿಧಿಸಿ ತೊಂದರೆ ನೀಡಬಾರದು ಎಂದು ಹೇಳಿದರು.

ಇನ್ನು ಗ್ರಾಹಕರು ವಿದ್ಯುತ್ ಬಿಲ್ ಪಾವತಿಸಿಲ್ಲ ಎಂಬ ಕಾರಣಕ್ಕೆ ಮುಂದಿನ ಜೂನ್ ವರೆಗೆ ಗೃಹ ಬಳಕೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬಾರದು ಹಾಗೂ ವಿದ್ಯುತ್ ದರ ಪ್ರಥಮ ಸ್ಲ್ಯಾಬ್ ನಂತೆ 3.80 ರೂ.ಗೆ ನಿಗದಿಪಡಿಸಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.