ಬಳ್ಳಾರಿ: ವಿಧಾನಸಭಾ ಚುನಾವಣೆಯಲ್ಲಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಚಾರ ಮಾಡಿದ ಜಿಲ್ಲಾ ಪಂಚಾಯ್ತಿ ಸದಸ್ಯ ಎಂ.ಎಂ.ಜೆ ಹರ್ಷವರ್ಧನ ಸೇರಿದಂತೆ ನಾಲ್ವರನ್ನು ಪಕ್ಷದಿಂದ ಉಚ್ಛಾಟನೆ ಮಾಡಗಿದೆ ಎಂದು ಜಿಲ್ಲಾಧ್ಯಕ್ಷ ಚೆನ್ನಬಸವನಗೌಡ ಆದೇಶ ಹೊರಡಿಸಿದ್ದಾರೆ. ಪಕ್ಷದ ಓಬಿಸಿ ಮೋರ್ಚಾದ ಜಿಲ್ಲಾ ಅಧ್ಯಕ್ಷ ಮುಟಗನಹಳ್ಳಿ ಕೊಟ್ರೇಶ್ , ಹಗರಿ ಬೊಮ್ಮನಹಳ್ಳಿ ತಾ.ಪಂ ಸದಸ್ಯ ಬುಡ್ಡಿ ಬಸವರಾಜ್ ಹಾಗೂ ಅನಿಲ್ ಎಂಬುವವರು ಹರ್ಷವರ್ಧನ ಅವರೊಂದಿಗೆ ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಚಾರ ಮಾಡಿದ್ದಾರೆಂದು ಅವರನ್ನು ಉಚ್ಛಾಟನೆ ಮಾಡಲಾಗಿದೆ.