ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸದಸ್ಯ ಸ್ಥಾನಗಳಿಗೆ ನಡೆದ ದ್ವೈವಾರ್ಷಿಕ ಚುನಾವಣೆಯ ಕಣದಲ್ಲಿ ಏಳು ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳಾದ ಆರ್.ಶಂಕರ್, ಎಂಟಿಬಿ ನಾಗರಾಜು, ಕೆ.ಪ್ರತಾಪಸಿಂಹ ನಾಯಕ್, ಸುನೀಲ್ ವಲ್ಯಾಪುರ್, ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ.ಹರಿಪ್ರಸಾದ್, ನಸೀರ್ ಅಹ್ಮದ್ ಹಾಗೂ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.