ಬೆಂಗಳೂರು : ಸಿದ್ದರಾಮಯ್ಯರು ಎರಡು ಸ್ಥಾನಗಳನ್ನು ಹೊಂದಿದ್ದಾರೆ. ಒಂದು ವಿಪಕ್ಷ ಸ್ಥಾನ ಮತ್ತೊಂದು ಶಾಸಕಾಂಗದ ನಾಯಕರಾಗಿದ್ದಾರೆ. ಹಾಗಾಗಿ ಎರಡು ಸ್ಥಾನಗಳಿಗಿಂತ ಒಂದು ಸ್ಥಾನದಲ್ಲಿ ಮುಂದುವರೆಯುವಂತೆ ಹೈಕಮಾಂಡ್ ಹೇಳಿದೆ.

ವಿಪಕ್ಷ ನಾಯಕನ ಸ್ಥಾನಕ್ಕಾಗಿ ಕೆಲ ದಿನಗಳ ಹಿಂದೆ ಸಿದ್ದರಾಮಯ್ಯ ತಮ್ಮ ಬೆಂಬಲಿಗರೊಂದಿಗೆ ದೆಹಲಿಗೆ ತೆರಳಿದ್ದರು. ಈ ವೇಳೆ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಶಾಕ್ ನೀಡಿದ್ದು, ಎರಡೆರಡು ಸ್ಥಾನಗಳನ್ನು ಒಬ್ಬರಿಗೆ ನೀಡಲು ಸಾಧ್ಯವಿಲ್ಲ. ಈಗಾಗಲೆ ಶಾಸಕಾಂಗದ ನಾಯಕರಾಗಿದ್ದೀರಿ, ಮತ್ತೆ ನಿಮಗೆ ವಿಪಕ್ಷ ನಾಯಕನ ಸ್ಥಾನ ನೀಡಲು ಸಾಧ್ಯವಿಲ್ಲ. ಎರಡು ಸ್ಥಾನಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ನಿಮ್ಮ ನಿರ್ಧಾರ ತಿಳಿಸಿ ಎಂದು ಹೈಕಮಾಂಡ್ ಖಡಕ್ ಸಂದೇಶ ರವಾನಿಸಿದೆ ಎಂಬ ಸುದ್ದಿ ಹರಿದಾಡುತ್ತಿದೆ.