ಧಾರವಾಡ: ವಿಮರ್ಶಕ , ಸಾಹಿತಿ ಗಿರಡ್ಡಿ ಗೋವಿಂದರಾಜ ಧಾರವಾಡದಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಮನೆಯಲ್ಲಿ ಹೃದಯಾಘಾತವಾಗಿ ಕುಸಿದು ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ಸೇರಿಸುವಾಗ ಮಾರ್ಗಮಧ್ಯ ಸಾವನ್ನಪ್ಪಿದ್ದಾರೆ.

ಐವತ್ತು ವರ್ಷಗಳ ಕಾಲ ಸಾಹಿತ್ಯ ಕೃಷಿಮಾಡಿ ಕರ್ನಾಟಕ ವಿಶ್ವವಿದ್ಯಾಲಯ ದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ , ಮುಖ್ಯಸ್ಥರಾಗಿ ನಿವೃತ್ತಿಯಾಗಿದ್ದರು. ಶಾರದಾಲಹರಿ, ರಸವಂತಿ , ಮರ್ಲಿನ್ ಮನ್ರೋ ಮತ್ತು ಇತರ ಪದ್ಯಗಳು,ಆ ಮುಖಾ-ಈ ಮುಖಾ,ಮಣ್ಣು, ಹಂಗು ಮತ್ತು ಇತರ ಕತೆಗಳು, ಒಂದು ಬೇವಿನಮರದ ಕಥೆ, ಸಣ್ಣ ಕತೆಯ ಹೊಸ ಒಲವುಗಳು, ಜನಪದ ಕಾವ್ಯ, ಕಾದಂಬರಿ: ವಸ್ತು ಮತ್ತು ತಂತ್ರ ಸೇರಿದಂತೆ ಮುಂತಾದ ಕೃತಿಗಳನ್ನು ರಚಿಸಿದ್ದಾರೆ

.ಗಿರಡ್ಡಿ ಗೋವಿಂದರಾಜ ಅವ್ರ ನಿಧನಕ್ಕೆ ಗಣ್ಯರು ನಾಡಿನ ಹಿರಿಯ ಸಾಹಿತಿಗಳು ಸಂತಾಪ ಸೂಚಿಸಿದ್ದಾರೆ.