ವಿಶಾಖಪಟ್ಟಣಂ: ಆಂಧ್ರದ ವಿಶಾಖಪಟ್ಟಣಂ ಜಿಲ್ಲೆಯ ಎಲ್ ಜಿ ಪಾಲಿಮರ್ಸ್ ಕಾರ್ಖಾನೆಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ₹1 ಕೋಟಿ ಪರಿಹಾರವನ್ನು ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.

ಅಲ್ಲದೆ ಎಲ್ಲಾ ಅಸ್ವಸ್ಥರ ಚಿಕಿತ್ಸೆಯ ವೆಚ್ಚವನ್ನು ರಾಜ್ಯ ಸರ್ಕಾರವೇ ಬರಿಸಲಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸದ್ಯ ಈ ದುರಂತದಲ್ಲಿ 13 ಮಂದಿ ಮೃತಪಟ್ಟಿದ್ದು, 200ಕ್ಕೂ ಅಧಿಕ ಜನ ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.