ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ಇದೇ  21 ಕೊನೆಯ ದಿನವಾಗಿದೆ. ಒಟ್ಟು 105 ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ಇವುಗಳಲ್ಲಿ ಪೂರ್ಣಕಾಲಿಕ 79, ಅರೆಕಾಲಿಕ 26 ಹುದ್ದೆಗಳು ಸೇರಿವೆ. ಈ ಹುದ್ದೆಗಳು 2020-21ನೇ ಶೈಕ್ಷಣಿಕ ಸಾಲಿಗೆ ಮಾತ್ರ ಸೀಮಿತವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಬಳ್ಳಾರಿ, ಕೊಪ್ಪಳದಲ್ಲಿ ಕಾರ್ಯ ನಿರ್ವಹಣೆ ಮಾಡಬೇಕಿದೆ.