ಬೆಂಗಳೂರು; ವೈಜನಾಥ್ ಪಾಟೀಲ್ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.
ಹೈದ್ರಾಬಾದ್ ಕರ್ನಾಟಕ ವಿಶೇಷ ಸ್ಥಾನಮಾನಕ್ಕಾಗಿ ಹೋರಾಟ ನಡೆಸಿದ್ದ ಮಾಜಿ ಸಚಿವ ವೈಜನಾಥ್ ಪಾಟೀಲ್ ನಿಧನಕ್ಕೆ ಕಂಬನಿ ಮಿಡಿದ ಅವರು, ಆತ್ಮೀಯರಾಗಿದ್ದ ವೈಜನಾಥ ಪಾಟೀಲ್ ನಿಧನದಿಂದ ಆಘಾತವಾಗಿದೆ.

ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಹೋರಾಟ ನಡೆಸುತ್ತಾ ಬಂದಿದ್ದ ಪಾಟೀಲ್ ಅವರು, ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಪಡೆಯಲು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು ಎಂದು ಬರೆದಿದ್ದಾರೆ.