ಮಂಡ್ಯ: ಸ್ವಲ್ಪ ದಿನ ಕಾದು ನೋಡಿ ಬಿಜೆಪಿಯ ಐವರು ಶಾಸಕರೇ ರಾಜೀನಾಮೆ ಕೊಡುತ್ತಾರೆ ಅಂತ ಮುಖ್ಯ ಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆಮಾತನಾಡಿದ ಅವರು  ಮಾಧ್ಯಮಗಳಲ್ಲಿ ಸರ್ಕಾರ ಬೀಳುತ್ತದೆ ಎಂಬ ಬಿಸಿ ಬಿಸಿ ಸುದ್ದಿ ಪ್ರಕಟವಾಗುತ್ತಿದೆ. ಇನ್ನೇನು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಬಿದ್ದೇ ಹೋಯ್ತು ಎಂಬ ಸುದ್ದಿಗಳು ಹೊರಬರುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು ಕಾದು ನೋಡಿ ಐವರು ಬಿಜೆಪಿ ಶಾಸಕರು ಪಕ್ಷದಿಂದ ಹೊರ ಬರುತ್ತಾರೆ ಎಂದು ಹೇಳಿದರು.