ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಇ-ಸಂಜೀವಿನಿ ಟೆಲಿಮೆಡಿಸನ್ ಕಾರ್ಯಕ್ರಮದಡಿಯಲ್ಲಿ ಎಂಬಿಬಿಎಸ್ ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುವುದು. ಜಿಲ್ಲೆಯ ಜಿಲ್ಲಾ ಆಸ್ಪತ್ರೆಯ ಹಬ್ ಸೆಂಟರ್‍ನಲ್ಲಿ ಟೆಲಿ ಕನ್ಸ್‍ಲ್‍ಟೇಶನ್‍ನಲ್ಲಿ ಕಾರ್ಯನಿರ್ವಹಿಸಲು ಎಂಬಿಬಿಎಸ್ ವಿದ್ಯಾರ್ಹತೆಯುವಳ್ಳ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೈದ್ಯರ ಹುದ್ದೆ 01: ಎಂಬಿಬಿಎಸ್ ವಿದ್ಯಾರ್ಹತೆಯುವಳ್ಳ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಮಾಸಿಕ ಸಂಚಿತ ವೇತನ ರೂ.45000/- ನೀಡಲಾಗುವುದು.

 ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿಗಳ ಕಚೇರಿ, ಜಿಲ್ಳಾ ಆಸ್ಪತ್ರೆ ಆವರಣ, ಚಿತ್ರದುರ್ಗ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಸಂಬಂಧಪಟ್ಟ ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರಗಳನ್ನು ಭರ್ತಿ ಮಾಡಿ ಡಿಸೆಂಬರ್ 5ರ ಒಳಗಾಗಿ ಅವಶ್ಯಕ ಪೂರಕ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಿ, ನಂತರ ಡಿಸೆಂಬರ್ 7 ರಂದು ಬೆಳಿಗ್ಗೆ 10 ರಿಂದ 2 ಗಂಟೆಯವರೆಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.

 ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-235983 ಸಂಪರ್ಕಿಸಬಹುದು ಎಂದು ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.