ನವದೆಹಲಿ: ವೈಮಾನಿಕ ದಾಳಿಯನ್ನು ರ‍್ಯಾಲಿಗಳಲ್ಲಿ ಬಳಸಿಕೊಂಡ ಬಗ್ಗೆ ಪ್ರಧಾನಿ ಮೋದಿ ವಿರುದ್ಧ ಶೀಘ್ರ ಕ್ರಮ ಜರುಗಿಸಲಾಗುತ್ತದೆ ಎಂದು ಚುನಾವಣೆ ಆಯೋಗದ ಮೂಲಗಳು ತಿಳಿಸಿವೆ.

ಈ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳುತ್ತೇವೆ. ಚುನಾವಣೆ ಮುಗಿಯುವವರೆಗೂ ಕಾಯುವುದಿಲ್ಲ. ಅಧಿಕಾರಿಗಳು ಈ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪ್ರಧಾನಿ ಮೋದಿಯವರು ಚುನಾವಣೆ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಸಿಪಿಎಂ ಮತ್ತು ಕಾಂಗ್ರೆಸ್‌ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಿತ್ತು.